ಬೆಂಗಳೂರು ನಗರದ ವೈಟ್‍ಫೀಲ್ಡ್ ಪೊಲೀಸ್ ಠಾಣಾ ಸರಹದ್ದಿನಲ್ಲಿ, ದಿನಾಂಕ: 11-03-2024 ರಂದು ರಾತ್ರಿ 9-30 ಸಮಯದಲ್ಲಿ, ಎರಡು ಕಾರ್‍ಗಳಲ್ಲಿ ಮಾರಕಾಸ್ತ್ರಗಳನ್ನು ಹೊಂದಿದ್ದ 10 ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳ ಪೈಕಿ ಓರ್ವನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣ ದಾಖಲಾಗಿದ್ದು, ಈತನ ವಿರುದ್ಧ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆದಿರುತ್ತದೆ. ಮತ್ತೋರ್ವನ ವಿರುದ್ಧ ಆಂದ್ರಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಈತನ ವಿರುದ್ಧ ಹಲವಾರು ಪ್ರಕರಣ ದಾಖಲಾಗಿದ್ದು, ಮುಡಿವೇಡು ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.
ವಶ ಪಡಿಸಿಕೊಂಡ ವ್ಯಕ್ತಿಗಳಿಂದ 6 ಕಬ್ಬಿಣದ ಲಾಂಗ್‍ಗಳು, 2 ಕಬ್ಬಿಣದ ಮಚ್ಚುಗಳು, 2 ಕಬ್ಬಿಣದ ಪಟ್ಟಿಗಳು, 2 ಕಬ್ಬಿಣದ ಚೌಕಾಕಾರದ ರಾಡ್‍ಗಳು, 5 ಪೆಪ್ಪರ್ ಸ್ಪ್ರೇಗಳು, 12 ಮೊಬೈಲ್ ಫೋನ್ ಹಾಗೂ 2 ಫಾರ್ಚುನರ್ ಕಾರ್‍ಗಳನ್ನು ವಶಪಡಿಸಿಕೊಂಡಿರುತ್ತದೆ. ಇವರುಗಳ ವಿರುದ್ಧ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯನ್ನು ವೈಟ್‍ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ||. ಶಿವಕುಮಾರ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪ, ಸಹಾಯಕ ಪೊಲೀಸ್ ಆಯುಕ್ತರು, ವೈಟ್‍ಫೀಲ್ಡ್ ಉಪ ವಿಭಾಗ ರವರ ನೇತೃತ್ವದಲ್ಲಿ, ವೈಟ್‍ಫೀಲ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.