ಶೇಷಾದ್ರಿಪುರದ ರಾಯರ ಮಠದಲ್ಲಿ ಗುರುಗಳ 402ನೇ ಪಟ್ಟಾಭಿಷೇಕ
By -
March 12, 2024
0
ಬೆಂಗಳೂರು : ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶೇಷಾದ್ರಿಪುರ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 402ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಾರ್ಚ್ 12, ಮಂಗಳವಾರ ಬೆಳಗ್ಗೆ ಫಲ-ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಅಷ್ಟೋತ್ತರ ಪಾರಾಯಣ, ಗುರುಗಳ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ, ಶ್ರೀ ಉಡುಪಿ ಕೃಷ್ಣಾಚಾರ್ಯರಿಂದ "ರಾಯರ ಕರುಣೆ" ವಿಷಯವಾಗಿ ಧಾರ್ಮಿಕ ಪ್ರವಚನ. ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ಕಾರ್ಯಕ್ರಮಗಳು ಜರುಗಿದವು.