ಅನಂತ್ ಕುಮಾರ್ ಹೆಗಡೆ ಹೇಳಿರೋದ್ರಲ್ಲಿ ತಪ್ಪೇನಿದೆ? ಕಾಂಗ್ರೆಸ್ಸೇ 95 ಸಲ ಸಂವಿಧಾನಕ್ಕೆ ತಿದ್ದುಪಡಿ ತಂದಿದೆ : ಸಿಟಿ ರವಿ
By -
March 11, 2024
0
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್ ಬಿಜೆಪಿ ಸಂಸದನ ವಿರುದ್ಧ ಮುಗಿಬಿದ್ದಿದ್ದು, ಬಿಜೆಪಿ ಕೂಡ ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ಅಂತರ ಕಾಯ್ದುಕೊಂಡಿದೆ. ಆದರೆ, ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾತ್ರ ಅನಂತ್ ಕುಮಾರ್ ಹೆಗಡೆ ಪರ ಬ್ಯಾಟ್ ಬೀಸಿದ್ದಾರೆ. ಅವರು ಹೇಳಿರುವುದರಲ್ಲಿ ತಪ್ಪೇನಿದೆ. ಸಂವಿಧಾನ ತಿದ್ದುಪಡಿಗೆ ಸಂವಿಧಾನದಲ್ಲಿಯೇ ಅವಕಾಶ ನೀಡಲಾಗಿದೆ. ಕಾಂಗ್ರೆಸ್ 95 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ ಎಂದು ಹೇಳಿದ್ದಾರೆ.