ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಕುಂದಲಗುರ್ಕಿ ಮುನೀಂದ್ರ ನೇಮಕ

VK NEWS
By -
0

ವಾರ್ತಾಜಾಲ,ಶಿಡ್ಲಘಟ್ಟ 

ಈ ಹಿಂದೆ ಎನ್.ಎಸ್.ಯು.ಐ ರಾಜ್ಯ ಸಂಚಾಲಕನಾಗಿದ್ದ ಕುಂದಲಗುರ್ಕಿ ಮುನೀಂದ್ರ ಅವರನ್ನು ಇದೀಗ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಟಿ ಶೇಖಲೆ ಅವರು ಆದೇಶ ಹೊರಡಿಸಿದ್ದಾರೆ.

 ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ, ಇಡೀ ರಾಜ್ಯದಲ್ಲಿ ಯುವ ಕಾಂಗ್ರೆಸ್ ಸಂಘಟನೆ ಮಾಡುವ ಮುಖಾಂತರ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಮಾಡುವ ನಿಟ್ಟಿನಲ್ಲಿ ಯುವಕರನ್ನು ಇಡೀ ರಾಜ್ಯದಲ್ಲಿ ಮತ್ತು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಕೆಲಸ ಮಾಡುತ್ತೇವೆ. ಇಂದಿನ ಪರಿಸ್ಥಿತಿಯಲ್ಲಿ ಇಡೀ ದೇಶವೇ ಜಾತಿ ಧರ್ಮ ಆಧಾರದಲ್ಲಿ ಒಡೆಯುವಂತಾಗಿದೆ. ಬಿಜೆಪಿ ಪಕ್ಷದವರು ಜನರ ಭಾವನೆಯನ್ನು ಭಾವನಾತ್ಮಕವಾಗಿ ಬದಲಿಸಿ, ಜನರ ಮನಸ್ಸನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷ ಜನರ ಮಧ್ಯೆ ಜನರಿಗಾಗಿ ಕೆಲಸ ಮಾಡುವಂತಹ ಪಕ್ಷವಾಗಿದ್ದು ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

 ಕರ್ನಾಟಕ ರಾಜ್ಯದಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ, ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವುದನ್ನು ಗಮನಿಸಿ ಜವಾಬ್ದಾರಿ ನೀಡಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಯುವ ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯ ಕಾರ್ಯಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಸೂಚನೆಯಂತೆ ಪಕ್ಷವನ್ನು ಹಾಗೂ ಯುವಜನರನ್ನು ಸಂಘಟಿಸುವುದಾಗಿ ಅವರು ಹೇಳಿದರು.

Post a Comment

0Comments

Post a Comment (0)