2024 PUC RESULTS : ಏ. 10ರಂದು ದ್ವಿತೀಯ ಪಿಯುಸಿ ಫಲಿತಾಂಶ

VK NEWS
By -
0


 ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ (ಏಪ್ರಿಲ್‌ 10) 10 ಗಂಟೆಯ ನಂತರ ಘೋಷಣೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ. ಹಾಗಾದರೆ ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡುವುದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ.

ಶಿಕ್ಷಣ ಇಲಾಖೆಯ ವೆಬ್ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ.

karresults.nic.in ಅಥವಾ pue.kar.nic ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.

* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್  ಕ್ಲಿಕ್ ಮಾಡಿ.

* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ.

* ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸಲಿದ್ದು, ಬಳಿಕ ಫಲಿತಾಂಶದ ಪುಟವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಬಾರಿ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ, ಪೈಕಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು..

ಬಾರಿ ಪರೀಕ್ಷೆಗಳನ್ನು ಮೂರು ಭಾಗಗಳಲ್ಲಿ ನಡೆಸಲಾಗಿದೆ. ರಾಜ್ಯಾದ್ಯಂತ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎನ್ನವಾಗಿದೆ.


Post a Comment

0Comments

Post a Comment (0)