ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಪಷ್ಟನೆ

VK NEWS
By -
0

 


 ಚಾಲೆಂಜಿಂಗ್ ಸ್ಟಾರ್ ದರ್ಶನ್  ಅವರು ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಸ್ಟಾರ್ ಚಂದ್ರು ಪರವಾಗಿ ದರ್ಶನ್ ಕ್ಯಾಂಪೇನ್ ಮಾಡುತ್ತಿದ್ದಾರೆ. ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿದು, ಬಿಜೆಪಿ ಸೇರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.  ಇದಕ್ಕೆ ದರ್ಶನ್ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದೇಕೆ ಎಂದು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಗಿ ಮಂಡ್ಯ ಲೋಕಸಭಾ ಚುನಾವಣಾ ಕಣಕ್ಕೆ ಎಚ್​ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಸುಮಲತಾ ಅವರು ಬಿಜೆಪಿ ಸೇರಿರುವದರಿಂದ ಅವರನ್ನು ಬೆಂಬಲಿಸಬೇಕಿದೆ. ಸದ್ಯ ಅವರು ಸೈಲೆಂಟ್ ಆಗಿದ್ದಾರೆ. ಯಾವುದೇ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿಲ್ಲ. ಹೀಗಿರುವಾಗಲೇ ಸುಮಲತಾ ಆಪ್ತ ಎನಿಸಿಕೊಂಡಿರುವ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಇಳಿದಿದ್ದಾರೆ.

‘ನಾನು ಪಕ್ಷದ ಪರ ಬರುವುದಿಲ್ಲ, ನಾನು ವ್ಯಕ್ತಿ ಪರ. ಐದು ವರ್ಷಗಳ ಹಿಂದೆ ನರೇಂದ್ರಣ್ಣ ಮಾಡಿದ ಸಹಾಯ ನೆನಪಿಸಿಕೊಳ್ಳುತ್ತೇನೆ’ ಎಂದು ಮಾತು ಆರಂಭಿಸಿದರು ದರ್ಶನ್. ‘ಮಾಧ್ಯಮದವರು ಏನೇನೋ ಹಾಕಿದ್ರೆ ತುಂಬಾ ಕಷ್ಟ ಆಗುತ್ತದೆ. ಹೀಗಾಗಿ ನಾನು ಸ್ಪಷ್ಟನೆ ಕೊಡುತ್ತೇನೆ. ಸುಮಲತಾಗೆ ಮಂಡ್ಯ ಸೀಟ್ ಸಿಕ್ಕಿಲ್ಲ ಎಂದರೆ ನಮ್ಮ ಪರ ನೀವು ಪ್ರಚಾರ ಮಾಡಬೇಕು ಎಂದು ಉದಯ್ ಗೌಡ್ರು ಕೇಳಿದ್ದರು. ಮೊದಲು ಕರೆದರು ಎನ್ನುವ ಕಾರಣಕ್ಕೆ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್​ನಿಂದ ಸ್ಟಾರ್ ಚಂದ್ರು ನಿಂತಿದ್ದಾರೆ. ನಿಮ್ಮ ಅತ್ಯಮೂಲ್ಯ ಮತವನ್ನು ಅವರಿಗೆ ನೀಡಿ. ನರೇಂದ್ರ ಹಾಗೂ ಉದಯ್ ಅವರ ಕೈಗಳನ್ನು ಬಲಪಡಿಸಿ’ ಎಂದು ದರ್ಶನ್ ಕೋರಿದ್ದಾರೆ.

Post a Comment

0Comments

Post a Comment (0)