: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಚನ್ನಪಟ್ಟಣದಲ್ಲಿ ಅಪಾರ ಜನಸಾಗರವಿದ್ದ ರೋಡ್ ಷೋದಲ್ಲಿ ಭಾಗವಹಿಸಿದ್ದರು.
ಬೋಲೋ ಭಾರತ್ ಮಾತಾಕಿ ಜೈ, ಬಿಜೆಪಿಗೆ ಜೈ ಕೂಗಿದ ಕಾರ್ಯಕರ್ತರು ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಡಾ. ಮಂಜುನಾಥ್, ಯೋಗೇಶ್ವರ್ ಅವರಿಗೆ ಜೈಕಾರ ಕೂಗುತ್ತ ಮುನ್ನಡೆದರು.
ಕಲಾತಂಡಗಳು ರೋಡ್ ಷೋದ ಆಕರ್ಷಣೆಯನ್ನು ಹೆಚ್ಚಿಸಿದವು. ಡಾ. ಮಂಜುನಾಥ್ ಅವರ ನಾಮಪತ್ರ ಸಲ್ಲಿಕೆಗೆ ಕಾರ್ಯಕರ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಹಾಜರಿರಲು ವಿನಂತಿಸಲಾಯಿತು. ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಹುರುಪು- ಉತ್ಸಾಹದಿಂದ ಪಾಲ್ಗೊಂಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಅಭ್ಯರ್ಥಿ ಡಾ. ಮಂಜುನಾಥ್, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮೊದಲಾದವರು ಭಾಗವಹಿಸಿದ್ದರು.