ಶೋಭಾ ಕರಂದ್ಲಾಜೆ ಪರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಬಿರುಸಿನ ಮತ ಪ್ರಚಾರ.

VK NEWS
By -
0

 ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ ನಲ್ಲಿ ಇಂದು ಮಾಜಿ ಬಿಬಿಎಂಪಿ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್ ಅವರು ಬೆಳಗ್ಗೆಯಿಂದಲೇ ಮತಬೇಟೆ ಆರಂಭಿಸಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪರ ಕ್ಷೇತ್ರದ ಜೆಡಿಎಸ್ ಬಿಜೆಪಿ ಪಕ್ಷದ ಎಲ್ಲ ನಾಯಕರೂ ಹಾಗೂ ಕಾರ್ಯಕರ್ತರು ಸೇರಿ ಎನ್ ಡಿ ಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವ್ರಿಗೆ ನಿಮ್ಮ ಮತವನ್ನು ನೀಡಿ ಗೆಲ್ಲಿಸಬೇಕು ಎಂದು ಕರಪತ್ರ ನೀಡಿ ಮನವಿ ಮಾಡಿಕೊಳ್ಳುತ್ತಿರುವುದು ಕಂಡು ಬಂತು. 

ಇಂದು ಬಹಿರಂಗ ಪ್ರಚಾರಕ್ಕೆಕೊನೆಯದಿನವಾಗಿರುವುದರಿಂದ ಎಲ್ಲ ಕಡೆ ಕೊನೆಯ ಹಂತದ ಪ್ರಚಾರ ಕೈಗೊಂಡು ರಾಜೇಂದ್ರಕುಮಾರ್ ಹಾಗೂ ಸ್ಥಳೀಯ ಮುಖಂಡರು ಕಾರ್ಯಕರ್ತರು ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸಿ ಮತ ನೀಡುವಂತೆ ಮನವಿ ಮಾಡಿದರು.  ರಾಜೇಂದ್ರಕುಮಾರ್ ಮಾತನಾಡಿ ದೇಶದ ಚುನಾವಣೆ ಇದಾಗಿದ್ದು, ವಿಶ್ವ ನಾಯಕ ನರೇಂದ್ರ ಮೋದಿಯವರು ಸಾಧನೆ ಹಾಗೂ ದೇಶದ ಅಭಿವೃದ್ಧಿಗಾಗಿ ಭದ್ರತೆಗಾಗಿ  ಮತ ನೀಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0Comments

Post a Comment (0)