ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರೊ.ಎಂ.ವಿ.ರಾಜೀವ್ ಗೌಡ ಅವರ ಪರವಾಗಿ ಮಲ್ಲೇಶ್ವರಂ ಕ್ಷೇತ್ರದ ಪ್ಯಾಲೇಸ್ ಗುಟ್ಟಹಳ್ಳಿಯ ವಯಾಲಿಕಾವಲ್ ಹಾಗೂ ಮಲ್ಲೇಶ್ವರ ಸುತ್ತಮುತ್ತಲ ಪ್ರದೇಶಗಳಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಖ್ಯಾತ ಚಲನಚಿತ್ರ ನಟಿ ಶ್ರೀಮತಿ ಉಮಾಶ್ರೀರವರು ಚುನಾವಣಾ ರೋಡ್ ಶೋನಲ್ಲಿ ಭಾಗವಹಿಸಿ, ಕಳೆದ ವಿಧಾನಸಭಾ ಚುನಾವಣೆಗೂ ಮುಂಚೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಐದು ಮಹತ್ವದ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ.
ಕಳೆದ 10 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸಿದೆ. ಅದರಂತೆ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಾದ್ಯಂತ ಕಡುಬಡತನದ ಕುಟುಂಬಗಳಿಗೆ ತಲಾ 1 ಲಕ್ಷ ನೀಡುತ್ತೇವೆ ಎಂದು ಈಗಾಗಲೇ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಘೋಷಿಸಿದ್ದಾರೆ.
ಅದರೊಟ್ಟಿಗೆ ಯುವಕರಿಗಾಗಿ ಯುವ ನ್ಯಾಯ್, ಮಹಿಳೆಯರಿಗಾಗಿ ನಾರಿ ನ್ಯಾಯ್', ರೈತರಿಗಾಗಿ ಕಿಸಾನ್ ನ್ಯಾಯ್, ಕಾರ್ಮಿಕರಿಗಾಗಿ ಶ್ರಮಿಕ್ ನ್ಯಾಯ್ ಮೂಲಕ ಐದು ಪ್ರಮುಖ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಕೂಡ ತೀರ್ಮಾನಿಸಲಾಗಿದೆ. ಪರಿಣಾಮವಾಗಿ ನಮ್ಮ ಐದು ಗ್ಯಾರಂಟಿಗಳ ಜೊತೆಗೆ ರಾಹುಲ್ ಗಾಂಧಿಯವರ ಗ್ಯಾರಂಟಿ ಯೋಜನೆಗಳು ಕೂಡ ಕರ್ನಾಟಕದ ಮನೆಮನೆಗಳಿಗೆ ತಲುಪಲಿವೆ. ಹೀಗಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪಿಸಲು ಪ್ರೊ.ಎಂ.ವಿ.ರಾಜೀವಗೌಡರಿಗೆ ಮತ ನೀಡಿ ಎಂದು ಮತದಾರರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ
ಮಲ್ಲೇಶ್ವರಂ ವಿಧಾನ ಸಭಾ ಕ್ಷೇತ್ರದ ಮುಖಂಡರಾದ ಅನೂಪ್ ಅಯ್ಯಂಗಾರ್, ಮಾಜಿ ಮಹಾಪೌರರಾದ ಜೆ. ಹುಚ್ಚಪ್ಪ, ಬಿ. ಕೆ. ಶಿವರಾಮ್, ಗಿರೀಶ್ ಲಕ್ಕಣ್ಣ, ಶ್ರೀಮತಿ ವಸಂತ ಕವಿತಾ ಮೊದಲಾದವರು ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸಹ ಭಾಗವಹಿಸಿದ್ದರು.