ಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್ ರಕ್ಷಣೆ

VK NEWS
By -
0


 

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಸುಮಾರು 16 ಅಡಿಯ ಕೊಳವೆ ಬಾವಿಗೆ ಬಿದ್ದಿದ್ದ. ಸಂಜೆ 5.30ರ ಸುಮಾರಿಗೆ ಆತ ಕೊಳವೆಬಾವಿಗೆ ಬಿದ್ದಿದ್ದ. ಸಂಜೆ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅಂತಿಮವಾಗಿ ಮಗುವನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

ಎರಡು ದಿನಗಳ ಹಿಂದೆ ಕೊರೆಸಿದ್ದ ತೆರೆದ ಕೊಳವೆಬಾವಿಗೆ ಬಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಅಗ್ನಿ ಶಾಮಕ ಮತ್ತು ಪೊಲೀಸರು ಸತತವಾಗಿ ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.‌ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬಾಲಕನ ಅಳುವುದು ಕೇಳಿಸಿತು. ಮಧ್ಯಾಹ್ನ 1.44ಕ್ಕೆ ಮಗುವನ್ನು ಜೀವಂತವಾಗಿ ಹೊರ ತೆಗೆಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ.
ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ಕರೆತರಲಾಗಲಾಗಿದೆ.
 

Post a Comment

0Comments

Post a Comment (0)