ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು)

VK NEWS
By -
0

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರಿಂದ ರಾಜಕೀಯ ವಿದ್ಯಮಾನಗಳ ಚರ್ಚೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.





ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ಎನ್. ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ವಿಧಾನಪರಿಷತ್ ಸದಸ್ಯ  ದಿನೇಶ್ ಗೂಳಿಗೌಡ, ಮಾಜಿ ಶಾಸಕರುಗಳಾದ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯ  ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಅವರು ಸದಾಶಿವ ನಗರದಲ್ಲಿನ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

Post a Comment

0Comments

Post a Comment (0)