ಸಿದ್ದರಾಮಯ್ಯಗೆ ಸಿಎಂ ಕುರ್ಚಿ ಕಳೆದುಕೊಳ್ಳುತ್ತೇನೆ ಎಂಬ ಭಯ ಬಂದಿದೆ; ಜಿ.ಟಿ. ದೇವೇಗೌಡ

VK NEWS
By -
0

 


ಬೆಂಗಳೂರು: ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಮಂಗಳವಾರ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ ಜಂಟಿ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ  ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕಾದರೆ ವರುಣಾ ಕ್ಷೇತ್ರದಲ್ಲಿ ೬೦,೦೦೦ ಮತಗಳ ಮುನ್ನಡೆ ಕೊಡಿ ಎಂದು ಸಿದ್ದರಾಮಯ್ಯ ಸೋಮವಾರ ಮನವಿ ಮಾಡಿದ್ದಾರೆ. ಇದರ ಹಿಂದೆ ಅಧಿಕಾರ ಕಳೆದುಕೊಳ್ಳುವ ಭಯವಿದೆ’ ಎಂದರು.
’ಸಿದ್ದರಾಮಯ್ಯ ಅವರು ಅವರ ಮನಸ್ಸಿನಲ್ಲಿ ಇರುವುದನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ನಾಲ್ವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಕಾಂಗ್ರೆಸ್ ಪಕ್ಷದಲಿ ಒಂದು ವರ್ಷದಿಂದ ಚರ್ಚೆ ನಡೆಯುತ್ತಿದೆ. ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎಂದು ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಬಹುಮತ ಬಂದರೆ ನಾನು ಉಳಿಯುತ್ತೇನೆ, ಇಲ್ಲವಾದರೆ ಕೆಳಕ್ಕಿಳಿಸುತ್ತಾರೆ ಎಂಬ ಸಂದೇಶವನ್ನು ಮುಖ್ಯಮಂತ್ರಿಯವರು ತಮ್ಮ ಭಾಷಣದಲ್ಲಿ ನೀಡಿದ್ದಾರೆ’ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅಮಿತ್ ಶಾ ಜಂಟಿ ಸಭೆ ನಡೆಸುತ್ತಿದ್ದಾರೆ. ಅಲ್ಲಿ ಹಲವು ವಿಷಯಗಳ ಕುರಿತು ಚರ್ಚೆಯಾಗಲಿದೆ ಎಂದರು.

Post a Comment

0Comments

Post a Comment (0)