ಬೆಂಗಳೂರು, ಮೇ 18 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆ ಕಳೆದ 60 ವರ್ಷಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಯುವತಿಯರು / ಮಹಿಳೆಯರಿಗೆ ವೃತ್ತಿಪರ ತರಬೇತಿ ನೀಡುತ್ತಿದ್ದು, 2024 ನೇ ಸಾಲಿನ ವೃತ್ತಿಪರ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಎಸ್‍ಎಸ್‍ಎಲ್‍ಸಿ/ ಪಿಯುಸಿ ಪಾಸ್ ಅಥವಾ ಫೇಲ್ ಆದ 17 ರಿಂದ 35 ವರ್ಷದೊಳಗಿನ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ತರಬೇತಿ ಪಡೆದ ಅಭ್ಯರ್ಥಿಗಳು ಬಾಲವಾಡಿ, ಶಿಶುವಿಹಾರ, ಹಗಲು ಪೆÇೀಷಣಾ ಕೇಂದ್ರ, ವಿಶೇಷ ಮಕ್ಕಳ ಶಾಲೆ, ಗಾಮೆರ್ಂಟ್ಸ್ ಕಂಪೆನಿಗಳಲ್ಲಿ ಶಾಲಾಪೂರ್ವ ಶಿಕ್ಷಕಿಯಾಗಿ ಕೆಲಸ ಮಾಡಲು ಅರ್ಹರಾಗುತ್ತಾರೆ. ಜೂನ್ 10 ರಿಂದ ಬೆಂಗಳೂರಿನ ಜಯಮಹಲ್ ಬಡಾವಣೆಯ ಬಾಲಸೇವಿಕಾ ತರಬೇತಿ ಕೇಂದ್ರದಲ್ಲಿ ತರಬೇತಿ ಆರಂಭವಾಗಲಿದೆ. ತರಬೇತಿ ಅವಧಿ 10 ತಿಂಗಳಾಗಿದ್ದು, ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅವಶ್ಯಕತೆ ಇರುವವರಿಗೆ, ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆ, ಬಾಲಸೇವಿಕಾ ತರಬೇತಿ ಕೇಂದ್ರ, ನಂ. 135, 3 ನೇ ಅಡ್ಡ ರಸ್ತೆ, ನಂದಿದುರ್ಗ ರಸ್ತೆ, ಜಯಮಹಲ್ ಬಡಾವಣೆ, ಬೆಂಗಳೂರು - 46 ಹಾಗೂ ದೂರವಾಣಿ ಸಂಖ್ಯೆ :080-23330846 / 22925898 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
****
ಮಹಿಳೆಯರಿಗಾಗಿ ಉಚಿತ ಟೈಲರಿಂಗ್
ಕೋಲಾರ ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾ) ಜಿಲ್ಲೆಯ 18 ರಿಂದ 45 ವರ್ಷ ವಯೋಮಿತಿಯುಳ್ಳವರು ಮೇ.23, ಗುರುವಾರದಂದು ಬೆಳಗ್ಗೆ.11ಕ್ಕೆ, ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ರೇಷನ್ ಕಾರ್ಡ್, ಆಧಾರ್ ಕಾಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ತರಬೇತಿಯು 30 ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.8971308776, 7760313833, 9483652240, ಸಂಪರ್ಕಿಸಬಹುದಾಗಿದೆ.