ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಮಹಾನ್ ಮಾನವತಾವಾದಿ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪುಪÁ್ಪರ್ಚನೆ ನೆರವೇರಿಸಿದರು.
ಜಗಜ್ಯೋತಿ ಬಸವೇಶ್ವರರ ಜಯಂತಿಯ ಶುಭಾಶಯ ಕೋರಿದ ಅವರು, ಅಣ್ಣ ಬಸವಣ್ಣನವರು 12ನೇ ಶತಮಾನದಲ್ಲೇ ಸಮಸಮಾಜದ ನಿರ್ಮಾಣದ ಕನಸು ಕಂಡವರು. ತುಳಿತಕ್ಕೆ ಒಳಗಾದ ಸಮಾಜಕ್ಕೆ ನ್ಯಾಯ ಕೊಡಬೇಕೆಂಬ ಆಶಯವನ್ನು ಹೊಂದಿ ಕಾರ್ಯ ನಿರ್ವಹಿಸಿದ್ದರು ಎಂದು ನುಡಿದರು.
ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಸಹ ಬಸವಣ್ಣನವರ ತತ್ವವನ್ನು ಅನುಸರಿಸಿ ಮುನ್ನಡೆಯುತ್ತಿದ್ದಾರೆ. ಅವರ ವಚನಗಳನ್ನು ಮೆಲುಕು ಹಾಕುತ್ತಿದ್ದಾರೆ ಎಂದು ನೆನಪಿಸಿದರು. ಬಸವಣ್ಣನವರು ತಮ್ಮ ನಿಜಜೀವನದ ಅನುಭವಗಳನ್ನು ವಚನಗಳ ಮೂಲಕ ಸಾಮಾನ್ಯ ಜನರಿಗೂ ತಲುಪುವ ನಿಟ್ಟಿನಲ್ಲಿ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು. ಬಸವಣ್ಣನವರ ವಚನಗಳು ನಮ್ಮ ಜೀವನಕ್ಕೆ ದಾರಿದೀಪ ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಬಿ. ಆರ್. ಮುನಿರಾಜು, ಚಿ.ನಾ. ರಾಮು, ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.