ಬೆಂಗಳೂರಿನ ಜಯನಗರದ 9ನೇ ಬಡಾವಣೆಯಲ್ಲಿರುವ ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮೇ 25, ಶನಿವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಅವರು ತಮ್ಮ ಗಾನಸುಧಾ ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಶ್ರೀ ಸರ್ವೋತ್ತಮ ಸಾಥ್ ನೀಡಿದರು.