ಮಂಗಳೂರು: ನಡುರಸ್ತೆಯಲ್ಲೇ ನಮಾಜ್-ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆ

VK NEWS
By -
0


 

ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

 ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮತಾಂಧರ ಬೆನ್ನಿಗೆ ನಿಲ್ಲುವುದರಲ್ಲಿ ಅತಿರೇಕಕ್ಕೆ ತಲುಪಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸಿದವರ ಮೇಲೆ ಗೂಂಡಾ ಕೇಸ್ ಹಾಕುತ್ತದೆ. ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಮತಾಂಧರನ್ನು ಬಿಟ್ಟು, ಪಿಎಸ್ಐ, ಡಿವೈಎಸ್ಪಿ ಅವರನ್ನು ಅಮಾನತು ಮಾಡುತ್ತೆ. ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿ ವಾಹನ ಸಂಚಾರಕ್ಕೆ ತೊಂದರೆ ಮಾಡಿದ ಮತಾಂಧರನ್ನು ರಕ್ಷಣೆ ಮಾಡಿ ಇನ್ಸ್‌ಪೆಕ್ಟರ್‌ಗೆ ರಜೆ ಮೇಲೆ ಕಳುಹಿಸುತ್ತೆ. ತಾಲಿಬಾನ್ ಮಾದರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ತನ್ನ ಎಲ್ಲೆ ಮೀರಿದೆ ಎಂದು ವಾಗ್ದಾಳಿ ನಡೆದಿದೆ.

ನಳಿನ್ ಕುಮಾರ್ ಕಟೀಲ್ ಅವರೂ ಕೂಡ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳೂರಿನ ರಸ್ತೆಯಲ್ಲಿ ನಮಾಝ್ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಅಲ್ಪಸಂಖ್ಯಾತರ ಒಲೈಕೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಕಿ ಕೇಸನ್ನು ಹಿಂದಕ್ಕೆ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ, ಕೆಲವು ಮತಾಂಧರನ್ನು ಖುಷಿಪಡಿಸಲು ಹಿಂದೂ ಮುಖಂಡ  ಶರಣ್ ಪಂಪ್ ವೆಲ್ ಅವರ ಮೇಲೆ ಕೇಸು ಹಾಕಿ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯಲು ಹೇಸುವುದಿಲ್ಲ ಎಂದು ಸಾಬೀತುಪಡಿಸಿದೆ ಎಂದು ಕಿಡಿಕಾರಿದ್ದಾರೆ.


Post a Comment

0Comments

Post a Comment (0)