ಧಾರವಾಡ : ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಆಯೋಜನೆ ಮಾಡಲು ಶ್ರೀರಾಮ ಸೇನೆ ನಿರ್ಧಾರ ಕೈಗೊಂಡಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ದಿ.9 ರಂದು ವಿದ್ಯಾಗಿರಿ ಸಭಾಂಗಣದಲ್ಲಿ50 ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಲಾಗುವುದು. ಬೀಳಗಿ ಮಠದ ವಚನಶ್ರೀ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ, ಸಚಿನ ಕುಲಕರ್ಣಿ ಕಾನೂನು ಸಲಹೆ ನೀಡಲಿದ್ದಾರೆ ಎಂದರು.
ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುತ್ತಿಲ್ಲ. ದೀಕ್ಷಾ ಮಾಡಲು ಕಾರಣ ಕಾಳಿಯ ಆರಾಧನೆ ಅವಳ ಶಕ್ತಿ ಮಹಿಳೆಯರಲ್ಲಿ ಬರಲಿ ಎಂಬುವುದಕ್ಕೆ ತ್ರಿಶೂಲ ದೀಕ್ಷಾ ನೀಡಲಾಗುತ್ತಿದ್ದು, ಈ ವಿಷಯ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಇಲ್ಲವೇ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಕುಲಕರ್ಣಿ ಎಚ್ಚರಿಕೆ ನೀಡಿದರು.
ಅಲ್ಲದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಹ ಬಹಳಷ್ಟು ಲೋಪಗಳು ಆಗುತ್ತಿವೆ. ಮತಾಂತರ ಪ್ರಕ್ರಿಯೆ ಸದ್ದಿಲ್ಲದೇ ಸಾಗುತ್ತಿದ್ದು, ಈ ಕುರಿತು ಶ್ರೀ ರಾಮ ಸೇನೆ ಧ್ವನಿ ಎತ್ತುವ ಕೆಲಸ ಮಾಡಲಿದೆ.
ಶ್ರೀರಾಮ ಸೇನೆಯು ಇದೀಗ ಸಹಾಯವಾಣಿ (9090443444) ಆರಂಭಿಸಿದ್ದು, ಅಗತ್ಯ ಇದ್ದವರು ಈ ಸಹಾಯವಾಣಿ ಸದುಪಯೋಗ ಪಡೆಯಬೇಕು. ಜೊತೆಗೆ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಎಲ್ಲಾ ರೀತಿಯಲ್ಲೂ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು.
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಕೆಲಸ ಆಗಬೇಕು. ಯಾರು ಘೋಷಣೆ ಕೂಗುತ್ತಾರೋ ಅಂಥವರ ಮನೆಗಳಿಗೆ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚುವ ಕೆಲಸ ಶ್ರೀರಾಮ ಸೇನೆ ಮಾಡಲಿದೆ ಎಂದು ಎಚ್ಚರಿಕೆಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದರು.
ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಾಟಕರ, ಧಾರವಾಡ ಗ್ರಾಮೀಣ ಅಧ್ಯಕ್ಷ ಮೈಲಾರ ಗುಡ್ಡಪ್ಪನರ, ಹುಬ್ಬಳ್ಳಿ ನಗರ ಉಪಾಧ್ಯಕ್ಷ ಗುಣಧರ ದಡೌತಿ, ಪುಟ್ಟು ಜೋಶಿ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.