ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಫಲಿತಾಂಶ ಬಹುತೇಕ ನಿಕ್ಕಿಯಾಗುತ್ತಿದೆ. ಈ ಮಧ್ಯೆ ಕರ್ನಾಟಕ ಮತ್ತು ತೆಲಂಗಾಣದಲ್ಲಿ ‘ಗ್ಯಾರಂಟಿ’ ಯೋಜನೆಗಳು ‘ಕೈ’ಹಿಡಿಯಬಹುದು ಎಂದು ಭಾವಿಸಿದ್ದ ಆಡಳಿತಾರೂಢ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಕರ್ನಾಟಕದಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಕಾಂಗ್ರೆಸ್ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಸಹ ಕಾಂಗ್ರೆಸ್ ಕೇವಲ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆಯಲ್ಲದೆ. ಇತರರು 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.