ಶಾಲೆಗಳಲ್ಲಿನ್ನು ಹುಟ್ಟುಹಬ್ಬಗಳ ಆಚರಣೆ ಇಲ್ಲ

VK NEWS
By -
0


 ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

Post a Comment

0Comments

Post a Comment (0)