ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಹುರಿಯಾಳು ಕೆ. ವಿ. ಗೌತಮ್ ಅವರಿಗೆ ಸೋಲುಂಟಾಗಿದೆ. ಬಿಜೆಪಿ ಬೆಂಬಲದೊಂದಿಗೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಎಂ. ಮಲ್ಲೇಶ್ ಬಾಬು, ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರೂ ಪ್ರಮುಖ ಅಭ್ಯರ್ಥಿಗಳ ವಿವರ ಇಂತಿದೆ:
ಎಂ. ಮಲ್ಲೇಶ್ ಬಾಬು-ಎನ್‌ಡಿಎ (ಜೆಡಿಎಸ್)-ಗೆಲುವು-5,76,806
ಕೆ. ವಿ. ಗೌತಮ್-ಕಾಂಗ್ರೆಸ್-ಸೋಲು-5,45,122
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಏಪ್ರಿಲ್ 26 ರಂದು ಮತದಾನ ನಡೆದಿತ್ತು. ಶೇ. 78.27 ರಷ್ಟು ಮತದಾನ ಆಗಿತ್ತು. ಕೋಲಾರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಎಸ್. ಮುನಿಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡಿಲ್ಲ. ಅವರ ಬದಲಾಗಿ ಎನ್‌ಡಿಎ ಮೈತ್ರಿ ಕೂಟದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ನೀಡಲಾಗಿತ್ತು.
2019ರ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರ ತೀವ್ರ ಪೈಪೋಟಿಗೆ ಸಾಕ್ಷಿಯಾಗಿತ್ತು. ಬಿಜೆಪಿ ಅಭ್ಯರ್ಥಿ ಎಸ್. ಮುನಿಸ್ವಾಮಿ ಅವರು 2 ಲಕ್ಷದ 10 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮುನಿಸ್ವಾಮಿ ಅವರು 7 ಲಕ್ಷದ 9 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಇನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ. ಎಚ್. ಮುನಿಯಪ್ಪ, ಸುಮಾರು 5 ಲಕ್ಷ ಮತಗಳನ್ನು ಗಳಿಸಿ ಸೋಲು ಕಂಡಿದ್ದರು.