ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಕೊಲೆ ಪ್ರಕರಣ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
‘ಸರ್ವ ಆತ್ಮಾನೇನ ಬ್ರಹ್ಮ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ. ಈ ಮೂಲಕ ಅವರು ದರ್ಶನ್ ಬಗ್ಗೆಯೇ ಟ್ವೀಟ್ ಮಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ.
‘ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎನ್ನುವ ವಾಕ್ಯವನ್ನೂ ಜಗ್ಗೇಶ್ ಅವರು ಬಳಸಿದ್ದಾರೆ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ. ಈ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.