ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಕಳೆದ ಕೆಲವು ದಿನಗಳಿಂದ ದರ್ಶನ್, ನಾನು, ನನ್ನ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳು ದುಃಖದಲ್ಲಿದ್ದೇವೆ. ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.
ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ಪ್ರಕಟಿಸಲು ನಾನು ಪ್ರತಿಯೊಬ್ಬರನ್ನೂ ಕೋರುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಜಯ ಸಾಧಿಸಲಿ. ಸತ್ಯಮೇವ ಜಯತೇ ಎಂದು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಸಾವಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರೇಣುಕಾಸ್ವಾಮಿ ಸಾವಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ನಿನ್ನೆ ಅನ್ನಪೂರ್ಣೇಶ್ವರಿ ಠಾಣೆಗೆ ವಿಜಯಲಕ್ಷ್ಮಿ ವಿಚಾರಣೆಗೆ ಬಂದಿದ್ದರು. ಪೊಲೀಸರು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ಬಂದು ವಿಚಾರಣೆ ಎದುರಿಸಿ ವಾಪಸ್ಸಾಗಿದ್ದರು.