ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜೂನ್ 22, ಶನಿವಾರ ಸಂಜೆ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಶ್ರೀಮತಿ ಭವಾನಿ ಎಂ. ರಾವ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು.
ಇವರ ಗಾಯನಕ್ಕೆ ಶ್ರೀ ಎಂ. ಎನ್. ಸತ್ಯನಾರಾಯಣ ಪಿಟೀಲು ವಾದನದಲ್ಲಿ ಹಾಗೂ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಶ್ರೀಮಠದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅನೇಕ ಸಂಗೀತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.