ಜಯನಗರ ವಿದಾನಸಭಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ ಸಮಾರಂಭ

VK NEWS
By -
0

 ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಗ್ಯಾರಂಟಿ ಯೋಜನೆಗಳ ನಾಡಿನ ಎಲ್ಲ ಕುಟುಂಬಗಳಿಗೆ ತಲುಪಿದೆ-ಸೌಮ್ಯರೆಡ್ಡಿ




*ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕುಟುಂಬಕ್ಕೆ ಗ್ಯಾರಂಟಿ ಯೋಜನೆಗಳು ತಲುಪಿದೆ- ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು*

ಜಯನಗರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ನ ಸಮಿತಿ ಜಯನಗರ ವಿಧಾನಸಭಾ ಕ್ಷೇತ್ರದ ಕಛೇರಿ ಉದ್ಘಾಟನೆ ಸಮಾರಂಭ.

ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು, ಮಾಜಿ ಶಾಸಕಿ ಸೌಮ್ಯರೆಡ್ಡಿರವರು, ಆಡಳಿತ ಪಕ್ಷದ ಮಾಜಿ ನಾಯಕರು, ಜಯನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಆನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜುರವರು ಉದ್ಘಾಟನೆ ಮಾಡಿದರು.

*ಇದೇ ಸಂದರ್ಭದಲ್ಲಿ ಸೌಮ್ಯರೆಡ್ಡಿ* ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದಲ್ಲಿ ಜಾರಿಗೆ ಬಂದಿದೆ.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಲಾಭ ತಲುಪಿದೆ.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗ, ಧರ್ಮದವರಿಗೆ ತಲುಪಿದೆ.

ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಮತ್ತು ಮಧ್ಯಮವರ್ಗದ ಜನರಿಗೆ ಆರ್ಥಿಕವಾಗಿ ಸಬಲರಾಗುವಲ್ಲಿ ಗ್ಯಾರಂಟಿ ಯೋಜನೆ ಸಫಲವಾಗಿದೆ.

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ 8,39481 ಮತ್ತು ಗೃಹ ಜ್ಯೋತಿ 32,95114,  ಅನ್ನಭಾಗ್ಯ 31,56,734 ಮತ್ತು ಶಕ್ತಿ ಯೋಜನೆ 96.59ಲಕ್ಷ  ಹಾಗೂ ಯುವನಿಧಿ 10,801 ಗ್ಯಾರಂಟಿ ಯೋಜನೆಯ ಲಾಭ ತಲುಪಿದೆ.

ರಾಜ್ಯದಲ್ಲಿರುವ ವಿರೋಧ ಪಕ್ಷಕ್ಕೆ ಗ್ಯಾರಂಟಿ ಯೋಜನೆಯ ಯಶ್ವಸಿ ಸಹಿಕೊಳ್ಳುವುದಕ್ಕೆ ಆಗುತ್ತಿಲ್ಲ.

ಬಡವರ ಪರ ಯೋಜನೆಗಳ ವಿರೋಧಿ ನಿಲುವು ಬಿಜೆಪಿ ಪಕ್ಷವಾಗಿದೆ ಎಂದು ಹೇಳಿದರು.

*ಗ್ಯಾರಂಟಿ ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜು* ಬಡವರ ಪರ ಯೋಜನೆಗಳನ್ನು ರೂಪಿಸುವಲ್ಲಿ ಕಾಂಗ್ರೆಸ್ ಪಕ್ಷ ಮೊದಲು.

ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಯನಗರ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ಬರಲು ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅರ್ಹ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಸಲಾಗುವುದು ಮತ್ತು ಫಲಾನುಭವಿಗಳನ್ನು ಗುರುತಿಸಿ ಗ್ಯಾರಂಟಿ ಯೋಜನೆ ಲಾಭ ತಲುಪುವಂತೆ ಮಾಡಲಾಗುವುದು ಎಂದು ಹೇಳಿದರು.

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Post a Comment

0Comments

Post a Comment (0)