ಆಯುಷ್ ಇಲಾಖೆಯಿಂದ ‘ಯೋಗೋತ್ಸವ ವಿನೂತನ ಕಾರ್ಯಕ್ರಮ

VK NEWS
By -
0

ಬೆಂಗಳೂರು, ಜೂನ್ 07 (ಕರ್ನಾಟಕ ವಾರ್ತೆ): 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯೋಗದ ಮಹತ್ವವನ್ನು ಸಾರ್ವಜನಿಕರಿಗೆ ಇನ್ನಷ್ಟು ತಲುಪುವ ಉದ್ದೇಶದಿಂದ ಯೋಗ ದಿನದ ಪೂರ್ವಭಾವಿಯಾಗಿ "ಯೋಗೋತ್ಸವ" ಎಂಬ ವಿನೂತನ ಕಾರ್ಯಕ್ರಮವನ್ನು ಆಯುಷ್ ಇಲಾಖೆಯು ಹಮ್ಮಿಕೊಂಡಿರುತ್ತದೆ.


ಈ ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು /ಇಲಾಖೆಗಳು ಆಯುಷ್ ಇಲಾಖೆ ಸಹಕಾರದೊಂದಿಗೆ ಜೂನ್ 10 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು /ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 04 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯಿಂದ ಆರೋಗ್ಯಕರ ಜೀವನ ಶೈಲಿಯ ಕುರಿತು ಮಾಹಿತಿ ಹಾಗೂ ಆಯುಷ್  ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು.

ಬೆಂಗಳೂರಿನಲ್ಲಿನ ಬೆಂಗಳೂರು ಅಪಾಟೆರ್ಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, LULU MALL / ಲೂಲು ಮಾಲ್ ಹಾಗೂ MALL OF ASIA, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುವುದು.

ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿವೆ ಎಂದು ಆಯುಷ್ ಇಲಾಖೆಯ ಯೋಗ ಮತ್ತು ನ್ಯಾಚುರೋಪತಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)