ಮೈಸೂರು: 'ಚುನಾವಣೆ ಸಂದರ್ಭ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದು, ಅದನ್ನು ರದ್ದುಮಾಡಲು ಒತ್ತಾಯಿಸಿದ್ದರು. ಜನ ಬಿಜೆಪಿ ಪರ ಮತ ಚಲಾಯಿಸಿದ್ದಾರೆ ಎಂದರೆ ಗ್ಯಾರಂಟಿ ವಿರುದ್ಧವಾಗಿ ಇದ್ದಾರೆ ಎಂದರ್ಥ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಪುನರಾವಲೋಕನಕ್ಕೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು' ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಯೋಜನೆಗಳನ್ನು ನಿಲ್ಲಿಸುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ ಹೇಳಿದರು.