ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ Curtain Raiser ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ದೇಶಗಳ ರಾಯಭಾರಿಗಳು, ಕಾನ್ಸಲ್ ಜನರಲ್ ಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆ ಪ್ರತಿನಿಧಿಗಳು ಮತ್ತು ಉದ್ಯಮಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದರು.
ಸಮಾರಂಭದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.