ಬೆಂಗಳೂರು : ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಷಾಢ ಶುದ್ಧ ಪ್ರಥಮ "ಏಕಾದಶಿ" ಪ್ರಯುಕ್ತ 17-7-2024 ಬುಧವಾರದಂದು ಜಗದ್ಗುರು ಶ್ರೀಮನ್ ಮದ್ವಾಚಾರ್ಯಮೂಲ ಮಹಾಸಂಸ್ಥಾನದೀಶ್ವರರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಪರಮಪೂಜ್ಯ 1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಶ್ರೀಮನ್ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಲಿದ್ದಾರೆ.
, ಶ್ರೀ ಸುದರ್ಶನ ಹೋಮದೊಂದಿಗೆ ತಾವು ತಪ್ತ ಮುದ್ರಧಾರಣೆಯನ್ನು ಸ್ವೀಕರಿಸಿ ತದನಂತರ ಶ್ರೀಮಠದ ಶಿಷ್ಯರಿಗೆ ಬೆಳಗ್ಗೆ 7:30 ರಿಂದ ರಾತ್ರಿ 9:30 ವರೆಗೆ ನಿರಂತರವಾಗಿ ತಪ್ತ ಮುದ್ರಧಾರಣೆಯನ್ನು ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಮಠದ ಪಂಡಿತರಿಂದ ಉಪನ್ಯಾಸ ಮಾಲಿಕೆಯು ನೆರವೇರಲಿದೆ ಎಂದು ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.