ಕಾರ್ಗಿಲ್ ವಿಜಯೋತ್ಸವ ಆಚರಣೆಯ 25ನೇ ವರ್ಷದ ಅಂಗವಾಗಿ ಶ್ರದ್ದಾಂಜಲಿ ಕಳಸವನ್ನು ಸೇನಾ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ವಿಧಾನ ಸೌಧದಲ್ಲಿರುವ ವಿಧಾನ ಪರಿಷತ್ ಸಭಾಪತಿಯವರ ಕಚೇರಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕ ನಾಗೇಂದ್ರ ಯಾದವ್, ಕಾರ್ಯದರ್ಶಿ ಮಹಾಲಕ್ಷ್ಮಿ, ವಿಧಾನ ಸೌಧದ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತ ಕರಿಬಸವನಗೌಡ, ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ಉನ್ನತ ಅಧಿಕಾರಿಗಳು, ಎನ್.ಸಿ.ಸಿ. ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.