ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜುಲೈ 18, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಶ್ರೀದೇವಿ ಪ್ರಸನ್ನ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀ ಎಸ್. ಶಶಿಧರ್ ಮತ್ತು ಮೃದಂಗ ವಾದನದಲ್ಲಿ ಶ್ರೀ ಅನಿರುದ್ಧ ವಾಸುದೇವ್ ಸಹಕರಿಸಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.