ಕೇರಳ, ಬಂಗಾಳ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ನೋಟಿಸ್

VK NEWS
By -
0


 ನವದೆಹಲಿ: ಮಸೂದೆಗಳಿಗೆ ಸಹಿ ಹಾಕಲು ವಿಳಂಬ ಮಾಡುತ್ತಿರುವ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉಭಯ ರಾಜ್ಯಗಳಿಗೂ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ, ಕೇಂದ್ರ ಗೃಹ ಮಂತ್ರಾಲಯ ಹಾಗೂ ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ರಾಜ್ಯಪಾಲರಿಗೆ ನೋಟಿಸ್ ಜಾರಿ ಮಾಡಿದೆ.

ಮಸೂದೆಗಳಿಗೆ ಅಂಕಿತ ಹಾಕದೆ, ರಾಷ್ಟ್ರಪತಿಯವರ ಪರಿಗಣನೆಗೆ ಬಿಡುತ್ತಿರುವ ಬಗ್ಗೆ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿದ್ದೇವೆ ಎಂದು ಕೇರಳ ಪರ ಹಾಜರಾದ ಹಿರಿಯ ವಕೀಲ ಕೆ.ಕೆ ವೇಣುಗೋಪಾಲ್ ಹೇಳಿದರು.

ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಜೈದೀಪ್ ಗುಪ್ತಾ ವಾದ ಮಂಡಿಸಿದರು.

Post a Comment

0Comments

Post a Comment (0)