ಬೆಂಗಳೂರು: ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಭಾಗದ ಬಡ ಮಕಳಿಗೆ ಹಿನ್ನಡೆಯಾಗುತ್ತಿದೆ. ವೈದ್ಯಕೀಯ ಶಿಕ್ಷಣಗಳ ಅವಕಾಶಗಳ ಮೇಲೆ ಹೊಡೆತ ಬೀಳುತ್ತಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಹಕ್ಕುಗಳನ್ನು ಕೇಂದ್ರದ ನೀಟ್ ಪರೀಕ್ಷಾ ವ್ಯವಸ್ಥೆ ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕನ್ನು ಕೇಂದ್ರ ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಪರಿಷತ್ತಿನಲ್ಲೂ ಮಸೂದೆಯನ್ನು ಅಂಗೀಕರಿಸಲಾಯಿತು. ನೀಟ್ ಪರೀಕ್ಷಾ ವ್ಯವಸ್ಥೆಯು ಬಡ ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ಕಸಿದುಕೊಳ್ಳುತ್ತಿದೆ. ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 (2019 ರ ಕೇಂದ್ರ ಕಾಯಿದೆ 30) ಇದರಿಂದ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ಕೈಬಿಡಲಾಗಿದೆ, ”ಎಂದು ನಿರ್ಣಯವನ್ನು ಓದಿ ಅಂಗೀಕರಿಸಲಾಯಿತು.
ಕೇಂದ್ರ ಸರ್ಕಾರವು ರಾಜ್ಯಕ್ಕೆ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಮತ್ತು ಸಿಇಟಿ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತು ಸರ್ವಾನುಮತದಿಂದ ಅಂಗೀಕರಿಸಿದೆ.