ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಕಿಡಿಕಾರಿದ್ದಾರೆ. ಪ್ರೀತಮ್ ಗೌಡ ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.
ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂದು ಪಕ್ಷದ ಕೋರ್ ಕಮಿಟಿ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪಾದಯಾತ್ರೆ ಬಗ್ಗೆ ಬಿಜೆಪಿಯರೇ ತೀರ್ಮಾನ ತೆಗೆದುಕೊಂಡಿದ್ದಾರೆ. ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬೆಂಬಲ ನೀಡುತ್ತಿಲ್ಲ. ಈ ವಿಚಾರದಿಂದ ನನ್ನ ಮನಸ್ಸಿಗೂ ನೋವಾಗಿದೆ ಎಂದು ಹೇಳಿದ್ದಾರೆ.