ರಾಜ್ಯಸಭೆಯಲ್ಲಿ ಖರ್ಗೆ ಅವರಿಗೆ ವಿಪಕ್ಷದ ನಾಯಕನ ಅವಕಾಶ ಕಡಿಮೆಯಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನ ಉತ್ತರ ಭಾರತದ ನಾಯಕರೊಬ್ಬರಿಗೆ ನೀಡುವ ಕುರಿತು ಚಿಂತನೆಗಳಿವೆ. ಇದಲ್ಲದೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳಿಂದ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದ್ದು, ಡ್ಯಾಮೇಜ್ ಕಂಟ್ರೋಲ್ ಗಾಗಿ ಖರ್ಗೆಯವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಸೋನಿಯಾ ಬಯಸಿದ್ದಾರೆಂದು ಹೇಳಲಾಗುತ್ತಿದೆ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪರಿಣಾಮಕಾರಿ ವಿರೋಧ ಪಕ್ಷದ ನಾಯಕರಾಗಿರುವ ಕಾರಣ, ಖರ್ಗೆ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಖರ್ಗೆಯವರಿಗೆ ಸಿಎಂ ಸ್ಥಾನ ನೀಡಿದ್ದೇ ಆದರೆ, ಈ ನಿರ್ಧಾರವನ್ನು ಸಿದ್ದರಾಮಯ್ಯ, ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ನ ಯಾವುದೇ ನಾಯಕರು ಪ್ರಶ್ನಿಸುವುದಿಲ್ಲ ಎಂದು ಹೇಳಲಾಗುತ್ತಿದೆ.