ಬೆಂಗಳೂರು: ಮುಡಾ ಹಗರಣದಲ್ಲಿ ಬದಲಿ ನಿವೇಶನಗಳ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ದಾಖಲೆಗಳನ್ನು ಸಹಿತ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಸ್ಥರು ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಚೇರಿಗೆ ದೂರುದಾರರು ಒದಗಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಇತ್ತೀಚೆಗೆ 400 ಪುಟ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಲಗತ್ತಿಸಿರುವ 25 ಪುಟಗಳ ಎರಡು ದಾಖಲೆಗಳು ಅತ್ಯಂತ ಪ್ರಮುಖ ದಾಖಲೆಗಳಾಗುತ್ತವೆ ಎಂಬುದನ್ನು ಮಾನ್ಯ ಲೋಕಾಯುಕ್ತರ ಗಮನಕ್ಕೆ ತರಲಾಗಿದೆ ಎಂದು ಎನ್.ಆರ್.ರಮೇಶ್ ಅವರು ಮಾಹಿತಿ ನೀಡಿದ್ದಾರೆ.