ಹೊನ್ನಾಳಿ:ಮಾಜಿ ಸಚಿವ ಬಿ.ಸಿ ಪಾಟೀಲ್ ರವರ ಅಳಿಯ ಪ್ರತಾಪ್ ಕುಮಾರ ಕೆ.ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ವಿಷ.ಕುಡಿದಿದ್ದ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.
ಶಿವಮೊಗ್ಗ-ಹರಿಹರ ಹೆದ್ದಾರಿಯಲ್ಲಿ ಬರುವ ಅರಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅವರು ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಆರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರಿನಲ್ಲಿ ಅವರು ಪತ್ತೆಯಾಗಿದ್ದಾರೆ. ಮಾಜಿ ಸಚಿವ ಬಿಸಿ ಪಾಟೀಲ್ ರವರ ಮೊದಲನೇ ಪುತ್ರಿಯ ಪತಿ ಪ್ರತಾಪ್ ಕುಮಾರ್ ರವಾಗಿದ್ದಾರೆ. ಅವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ