ಬೆೆಂಗಳೂರು : ಪುಟ್ಟೇನಹಳ್ಳಿ ಠಾಣೆಯಲ್ಲಿ 2012ನೇ ಸಾಲಿನ ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದು, ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುತ್ತಾನೆ. ಈತನು ಪತ್ತೆಯಾಗದ ಕಾರಣ ಮಾನ್ಯ ನ್ಯಾಯಾಲಯವು ಈ ಪ್ರಕರಣವನ್ನು ಎಲ್‌ಪಿಆರ್ ಪ್ರಕರಣವೆಂದು ಪರಿಗಣಿಸಿರುತ್ತದೆ.
ಈ ಆರೋಪಿಯ ಪತ್ತೆಗಾಗಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ವಿಶೇಷ ತಂಡವನ್ನು ರಚಿಸಿ, ತನಿಖೆ ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ ದಿನಾಂಕ:11/07/2024 ರಂದು ಆರೋಪಿಯನ್ನು 10ನೇ ಕ್ರಾಸ್, ಅನಂತನಗರ, ಎಲೆಕ್ಟಾçನಿಕ್ ಸಿಟಿ, 2ನೇ ಹಂತದ ತನ್ನ ಸಂಬAಧಿಕರ ಮನೆಯಿಂದ ಆತನನ್ನು ವಶಕ್ಕೆ ಪಡೆದು, ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿ, ಅದೇ ದಿನ ಮಾನ್ಯ ನ್ಯಾಯಾಲಯಕ್ಕೆ ಹಾರ‍್ಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಬೆೆಂಗಳೂರು ದಕ್ಷಿಣ ವಿಭಾಗದ ಮಾನ್ಯ ಉಪ-ಪೊಲೀಸ್ ಆಯುಕ್ತರಾದ ಶ್ರೀ ಲೊಕೇಶ್ ಭ ಜಗಲಾಸರ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ಸುಬ್ರಮಣ್ಯಪುರ ಉಪ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಗಿರೀಶ ಎಸ್.ಬಿ ರವರ ನೇತೃತ್ವದಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಹೆಚ್.ಕೆ ರವಿಕುಮಾರ್ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿರವರುಗಳು ಎಲ್.ಪಿ.ಆರ್ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.