ಭಾರತದ 78 ನೇ ಸ್ವಾತಂತ್ರೋತ್ಸವವನ್ನು ನಗರದ ಜೆ. ಸಿ. ರಸ್ತೆಯಲ್ಲಿರುವ ಜರ್ನಲಿಸ್ಟ್ ಕಾಲೋನಿಯಲ್ಲಿ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಲಾಗಿದ್ದ, ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಲಯನ್ಸ್ ಕ್ಲಬ್ ಕಾವೇರಿ ಸಂಸ್ಥಾಪಕ ಅಧ್ಯಕ್ಷರು ಹಾಗೂ ಲಯನ್ಸ್ ಸಂಸ್ಥೆಯ ಸಂಚಾರಿ ಜಾಗೃತಿ ವಿಭಾಗದ ಜಿಲ್ಲಾಧ್ಯಕ್ಷರಾದ ಡಾ. ಜಿ. ಎಸ್. ಚೌಧರಿ ನಾಯ್ಡುರವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಎ ಡಿ ಎ ಅಧ್ಯಕ್ಷರು ವೆಂಕಟೇಶ್, ಸುನಿಲ್ ಆರೋರ, ಹರೀಶ್ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸಾರ್ವಜನಿಕರಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಸಾಗರ್ ಆಸ್ಪತ್ರೆ, ಲಯನ್ಸ್ ರಕ್ತ ನಿಧಿ ಹಾಗೂ ಆಫ್ಟಿಕಲ್ ಸ್ಕ್ವೇರ್ ರವರ ಸಹಯೋಗದಲ್ಲಿ ಏರ್ಪಡಿಸಲಾಗಿತ್ತು.