ಈ ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಯಡಿಯೂರಪ್ಪ ಭವಿಷ್ಯ

VK NEWS
By -
0


  ಬೆಂಗಳೂರು, ಆಗಸ್ಟ್‌ 03: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಒತ್ತಾಯಿಸಿದರು. ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಕೆಂಗೇರಿಯಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ಯಡಿಯೂರಪ್ಪ ಅವರು, ಕುಂಟುನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ . ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಬಿ ಎಸ್ಯಡಿಯೂರಪ್ಪ ಅವರು ಹೇಳಿದ್ದಾರೆ.

ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ; 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು.ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ; ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ. ಬಾಬಾಸಾಹೇಬ ಡಾ.ಅಂಬೇಡ್ಕರರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಗಾರಿ ಬಾರಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟನೆ ಮಾಡಲಾಯಿತು. ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ, ಧಿಕ್ಕಾರ, ಧಿಕ್ಕಾರ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಘೋಷಣೆಗಳನ್ನು ಕೂಗಲಾಯಿತು.

ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರಕಾರವು ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ ಎಂದು ಟೀಕಿಸಿದರು.

ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ಬೆಂಬಲ, ರಕ್ಷಣೆ ಕೊಡುತ್ತಿದ್ದಾರೆ. ಭ್ರಷ್ಟಾಚಾರ ತಮ್ಮ ಬುಡಕ್ಕೆ ಬರುವ ಆತಂಕದಿಂದ ಮುಖ್ಯಮಂತ್ರಿಗಳೇ ಅಧಿಕಾರಿಗಳಿಗೆ ಬೆಂಬಲ ನೀಡುತ್ತಿದ್ದಾರೆ.

ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ನೀಡಲು ಎಟಿಎಂ ಸರಕಾರ ಬರುತ್ತಿದೆ ಎಂದು ಚುನಾವಣೆ ವೇಳೆ ಹೇಳಿದ್ದೆವು. ಮುಡಾ ಹಗರಣ ನಡೆದುದಾಗಿ ಸಿದ್ದರಾಮಯ್ಯನವರೇ ನೇಮಿಸಿದ ಮುಡಾ ಅಧ್ಯಕ್ಷ ಮರಿಗೌಡರೇ ಹೇಳಿದ್ದಾರೆ. ಪರಿ಼ಶಿಷ್ಟ ಸಮುದಾಯಕ್ಕೆ ನಿರಂತರ ಅನ್ಯಾಯ ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಪಕ್ಷ. ಅಂಥ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕಲಿದ್ದೇವೆ ಎಂದು ವಿಜಯೇಂದ್ರ ಪ್ರಕಟಿಸಿದರು.

Post a Comment

0Comments

Post a Comment (0)