ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಆದರ್ಶಗಳನ್ನು ಪಾಲಿಸಿ : ಶಾಸಕ ರವಿಕುಮಾರ್

VK NEWS
By -
0

ಶಿಡ್ಲಘಟ್ಟ : ಅಸಮಾನತೆ, ವರ್ಣ,ಜಾತಿ,ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು ಶಿವಯೋಗಿ ಸಿದ್ದರಾಮೇಶ್ವರರು ಎಂದು ಶಾಸಕ ಬಿ.ಎನ್ ರವಿಕುಮಾರ್ ಅಭಿಪ್ರಾಯ ಪಟ್ಟರು.

ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶಿಡ್ಲಘಟ್ಟ ಹಾಗೂ ಬೋವಿ ಸಮುದಾಯದ ವತಿಯಿಂದ 853 ನೇ  ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು.

ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ.

12ನೇ ಶತಮಾನದಲ್ಲಿದ್ದ ಬಹಳಷ್ಟು ಪಿಡುಗುಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನ ಚಳುವಳಿಕಾರರಲ್ಲಿ ಸಿದ್ದರಾಮೇಶ್ವರರು ಕೂಡ ಪ್ರಮುಖರು ಎಂದು ವಿವರಿಸಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಕಲ್ಲು ಗಣಿಗಾರಿಕೆ ಅಥವಾ ಗ್ರಾನೈಟ್, ಕ್ರಷರ್ ಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಖಡಕ್ಕಾಗಿ ಎಚ್ಚರಿಸಿದರು.

ತಹಶೀಲ್ದಾರ್ ಬಿ.ಎನ್ ಸ್ವಾಮಿ ಮಾತನಾಡಿ,ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು. ಶಿವಯೋಗಿ ಸಿದ್ಧರಾಮೇಶ್ವರರು ಸಾವಿರಾರು ವಚನಗಳನ್ನು ರಚಿಸಿ ಹಾಡಿದ್ದಾರೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದರು. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು. ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

 ಶಿವಯೋಗಿ ಸಿದ್ದರಾಮೇಶ್ವರರು ಇವರು ಒಂದು ಜಾತಿಗೆ ಮಾತ್ರ ಸೀಮಿತವಲ್ಲ ಇವರು ಎಲ್ಲಾ ಸಮುದಾಯಗಳ ಪರ ಧ್ವನಿ ಎತ್ತಿ, ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿ, ಹಳ್ಳಿ ಹಳ್ಳಿಗೂ ಹೋಗಿ ಕೆರೆಗಳನ್ನ ನಿರ್ಮಿಸಿ ನೀರನ್ನು ಸಂಗ್ರಹಿಸಿದವರು ಕೇವಲ ವ್ಯಕ್ತಿಯಲ್ಲದೆ ಶಕ್ತಿಯಾಗಿ ಕಾರ್ಯ ನಿರ್ವಹಿಸಿದವರು.

ಶ್ರೀಕಾಂತ್, ಭೋವಿ ಯುವ ಸಮುದಾಯದ ಉಪಾಧ್ಯಕ್ಷರು.ಈ ಸಂದರ್ಭದಲ್ಲಿ ಮುಖ್ಯ ಭಾಷಣಕಾರ ಬಿ.ವಿ ಪ್ರಕಾಶ್,ಡಾ.ವೆಂಕಟೇಶ್ ಮೂರ್ತಿ,ಬಂಕ್ ಮುನಿಯಪ್ಪ,ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್, ನಗರಸಭೆ ಸದಸ್ಯ ಸುರೇಶ್,ಚಲಪತಿ,ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ, ಪಟೇಲ್ ನಾರಾಯಣಸ್ವಾಮಿ, ಲಿಯೋ ಕ್ಲಬ್ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Post a Comment

0Comments

Post a Comment (0)