ಆನೇಕಲ್ ,ಗಾರ್ಮೆಂಟ್ಸ್ ನಲ್ಲಿ ಬೆಂಕಿ ದುರಂತ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲು
ಆನೇಕಲ್ : ರಾಜ್ಯ ರಾಜಧಾನಿ ಕೂಗಳತೆ ದೂರದಲ್ಲಿ ಇಂದು ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಬಟ್ಟೆ ಕಾರ್ಖಾನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಬೊಮ್ಮಸಂದ್ರದ ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ, ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ. ಕಾರ್ಖಾನೆಯ ಒಳಗೆ ಇದ್ದ ಮಷಿನರಿಗಳು ಸ್ಫೋಟಗೊಂಡಿವೆ.
ಇದೀಗ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಕ್ಕಪಕ್ಕದಲ್ಲಿಯೇ ಇತರ ಕಂಪನಿಗಳು ಹಾಗೂ ವಿಇನ್ ಹೋಟೆಲ್ ಇದ್ದು, ಸ್ಥಳದಲ್ಲಿ ಭಾರೀ ಆತಂಕ ಹುಟ್ಟಿಕೊಂಡಿದೆ. ಬೆಂಕಿ ಅವಘಡದಿಂದ ಕೋಟ್ಯಂತರ ರೂ. ನಷ್ಟವಾಗಿದೆ. ಕಾರ್ಖಾನೆಯಲ್ಲಿ ಕಾರ್ಮಿಕರು ಸಿಲುಕಿರುವ ಆತಂಕವೂ ಹೆಚ್ಚಿದೆ.