ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾದ ಪೆÇ್ರ ಯು. ಆರ್ ರಾವ್ ಹಾಗೂ ಖ್ಯಾತ ವಿಜ್ಞಾನಿ U.R. Rao Satellite Centre & ISTRAC ಸಂಸ್ಥೆಯ ನಿರ್ದೇಶಕರು ಹಾಗೂ ಅಕಾಡೆಮಿಯ ಮಾಜಿ ಅಧ್ಯಕ್ಷರು ಪದ್ಮಶ್ರೀ ಪುರಸ್ಕøತರಾದ ಡಾ.ಎಸ್.ಕೆ. ಶಿವಕುಮಾರ್ ರವರ ಜನ್ಮ ದಿನದ ವಾರ್ಷಿಕೋತ್ಸವದ ಅಂಗವಾಗಿ ಬಾಹ್ಯಾಕಾಶ ಜಾಗೃತಿ ದಿನ (Space Awareness Day) ಕಾರ್ಯಕ್ರಮವನ್ನು ಮಾರ್ಚ್ 15 ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಯು.ಆರ್.ರಾವ್ ಸೆಟಲೈಟ್ ಸೆಂಟರ್‍ನ ಉಪ ನಿರ್ದೇಶಕರಾದ ಡಾ.ಆರ್. ವಿ. ನಾಡಗೌಡ ಮತ್ತು ISಖಿಖಂಅ ಸಂಸ್ಥೆಯ ಹಿರಿಯ ವಿಜ್ಞಾನಿ ಶ್ರೀನಾಥ್ ರತ್ನಕುಮಾರ್ ಅವರು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿಜ್ಞಾನ/ಇಂಜಿನಿಯರಿಂಗ್ ವಿದ್ಯಾರ್ಥಿಗಳು, ವಿಜ್ಞಾನ ಆಸÀಕ್ತರು ಮತ್ತು ಆಸಕ್ತ ಜನ ಸಾಮಾನ್ಯರು ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಮಾರ್ಚ್ 14 ರೊಳಗೆ ಗೂಗಲ್ ಫಾರಂ https://forms.gle/KAhKfog3sUZJowpx5 ನಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳ ಮೊಬೈಲ್ ಸಂಖ್ಯೆ: 9845258894 & 9743084194 ಗೆ ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್ ಸೈಟ್ http://kstacademy.in ವೀಕ್ಷಿಸಬಹುದಾಗಿದೆ ಎಂದು ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.