ಯಲಹಂಕ ಉಪನಗರ: ದ್ವಿ-ಚಕ್ರ ವಾಹನ ಕಳ್ಳನಬಂಧನ, ರೂ. 3.5 ಲಕ್ಷ. ಮೌಲ್ಯದ 7 ವಾಹನಗಳ ವಶ

VK NEWS
By -
0

ಬೆಂಗಳೂರು : ಬಿ.ಬಿ.ಎಂ.ಪಿಯಲ್ಲಿ ಕಸ ಸಾಗಿಸುವ ಕೆಲಸ ಮಾಡಿಕೊಂಡಿದ್ದು, ಯಲಹಂಕ ಉಪನಗರದಲ್ಲಿರುವ, ಪುಟ್ಟೇನಹಳ್ಳಿಯ ವೆಂಕಟೇಶ್ವರ ಗಾರ್ಮೇಂಟ್ಸ್ ರೋಡ್‌ನಲ್ಲಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ, ಬಿಬಿಎಂಪಿ ಆಟೋ ರೀಕ್ಷಾದಲ್ಲಿ ಕಸ ಸಾಗಿಸಲು ಹೋಗಿರುತ್ತಾರೆ. ಸಂಜೆ ವಾಪಸ್ ಬಂದು ನೋಡಲಾಗಿ, ಪರ‍್ಯಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ವೀರಸಾಗರದ ಮುಖ್ಯರಸ್ತೆಯಲ್ಲಿ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. 



ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ಕಳ್ಳನು ತಪ್ಪೊಪ್ಪಿಕೊಂಡಿರುತ್ತಾನೆ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ 6 ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಕಳವು ಮಾಡಿದ ದ್ವಿ-ಚಕ್ರ ವಾಹನಗಳನ್ನು ದೊಡ್ಡಬಳ್ಳಾಪುರ ಮುಖ್ಯರಸ್ತೆಯ ರೈಲ್ವೆ ವೀಲ್ ಅಂಡ್ ಅಕ್ಸಿಲ್ ಪ್ಯಾಕ್ಟರಿಯ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, 6 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಒಟ್ಟು 7 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ 3,50,000/-(ಮೂರು ಲಕ್ಷದ ಐವತ್ತು ಸಾವಿರ ರೂಪಾಯಿ) ಎನ್ನಲಾಗಿದೆ.

ಆರೋಪಿಯ ಬಂಧನದಿAದ, 1) ಯಲಹಂಕ ಉಪನಗರ ಪೊಲೀಸ್ ಠಾಣೆಯ-03 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಚಿಕ್ಕಜಾಲ ಪೊಲೀಸ್ ಠಾಣೆಯ-02 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, ಸೇರಿದಂತೆ ಒಟ್ಟು 05 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 02 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ವಿ.ಜೆ ಸಜೀತ್ ರವರ ಮಾರ್ಗದರ್ಶನದಲ್ಲಿ ಮತ್ತು ಯಲಹಂಕ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನರಸಿಂಹಮೂರ್ತಿ ರವರ ನೇತೃತ್ವದಲ್ಲಿ, ಯಲಹಂಕ ಉಪನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಧಾಕರ್ ರೆಡ್ಡಿರವರ ಅಧಿಕಾರಿ/ಸಿಬ್ಬಂದಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Post a Comment

0Comments

Post a Comment (0)