ಬೆಂಗಳೂರು ನಗರ ಪೊಲೀಸ್ ಹಾಗೂ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ನ ಸಂಯುಕ್ತ ಯೋಜನೆಯಾದ ಹಿರಿಯರ ಸಹಾಯವಾಣಿಯು ಹಿರಿಯ ನಾಗರಿಕರಿಗಾಗಿ ವಿನ್ಯಾಸಗೊಳಿಸಿದ ಸೈಬರ್ ಸುರಕ್ಷತಾ ಕಾರ್ಯ ಕ್ರಮವಾದ ಡಿಜಿಸೇಫ್ 60+ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾರ್ಚ್-15 ರಂದು ಶನಿವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಛೇರಿಯ ಕಾನ್ಪರೆನ್ಸ್ ಹಾಲ್‌ನಲ್ಲಿ ನಡೆಯಲಿದೆ. ಶ್ರೀ. ಬಿ ದಯಾನಂದ, ಐಪಿಎಸ್ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮವು ಹಿರಿಯ ನಾಗರಿಕರ ವಿರುದ್ಧದ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಅಗತ್ಯವಾದ ಜ್ಞಾನ ಮತ್ತು ಕೌಶಲ್ಯವನ್ನು ನೀಡುವ ಉದ್ದೇಶವನ್ನು ಹೊಂದಿದೆ. ಈ ಕಾರ್ಯಕ್ರಮದ ಉದ್ದೇಶವು ಹಿರಿಯ ನಾಗರಿಕರನ್ನು ಡಿಜಿಟಲ್ ಜಗತ್ತಿನಲ್ಲಿ ಸುರಕ್ಷಿತರನ್ನಾಗಿಸುವುದಾಗಿದೆ.
