ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 1, ಶನಿವಾರ ಸಂಜೆ ಏರ್ಪಡಿಸಿದ್ದ ಊಂಜಲ್ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ವಾಣಿಶ್ರೀ ರಾಮಕೃಷ್ಣ ಅವರು ಅನ್ನಮಾಚಾರ್ಯರ ಕೀರ್ತನೆಗಳನ್ನೂ ಹಾಗೂ ಹರಿದಾಸರ ಪದಗಳನ್ನೂ ಪ್ರಸ್ತುತಪಡಿಸಿದರು.
ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿದ್ವಾನ್ ಎಂ.ಎಸ್. ಗೋವಿಂದಸ್ವಾಮಿ, ಮೃದಂಗ ವಾದನದಲ್ಲಿ ವಿದ್ವಾನ್ ಆರ್. ಗಣೇಶ್ ಸಹಕಾರ ನೀಡಿದರು.
ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.