ಬೀದರ್- ಬೆಂಗಳೂರು ವಿಮಾನಸೇವೆ ಪುನಾರಂಭ

VK NEWS
By -
0

ಸ್ಥಗಿತಗೊಂಡಿದ್ದ ಬೀದರ್–ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ ಏರ್ ಸಂಸ್ಥೆಯು ಇದೇ ತಿಂಗಳ ಏ. 15ರಿಂದ ಪುನಾರಂಭ ಮಾಡಲಿದೆ.

ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕಾದ ಅಗತ್ಯವಿದೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇವೆರಡೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಲು ಅರ್ಹತೆ ಪಡೆದಿವೆ. ಈ ಭಾಗದವರು ವಿದೇಶಕ್ಕೆ ಹೋಗಬೇಕಾದರೆ ನೆರೆಯ ರಾಜ್ಯ ಗೋವಾಕ್ಕೆ ಹೋಗಬೇಕು. ಈ ನಿಲ್ದಾಣಗಳನ್ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.


Post a Comment

0Comments

Post a Comment (0)