LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ಪೋಟೋ ಸಾವಿರ ಪದಗಳಿಗೆ ಸಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ - ಮುಖ್ಯಮಂತ್ರಿಗಳ ಪ್ರಶ್ನೆ
ಮೈಸೂರು / ಬೆಂಗಳೂರು, ಅಕ್ಟೋಬರ್ 18, (ಕರ್ನಾಟಕ ವಾರ್ತೆ): ಸೆನ್ಸೇಷನ್ ಸುದ್ದಿ (Sensation News) ಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ವರದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಅವರು ಪ್ರಶ್ನಿಸಿದರು.  ಮೈಸೂರು ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ (Photo Journalists Association) ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್ ಗಳಿಗೆ "ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ" ವಿತರಿಸಿ ಮಾತನಾಡುತ್ತಾ, ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಶಾಸಕರಾದ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ