LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನರಕ ಚತುರ್ದಶಿ - ದೀಪಾವಳಿ ನಿಮಿತ್ತ ವಿಶೇಷ ಲೇಖನ !

ಶ್ರೀಮದ್ಭಾಗವತ ಪುರಾಣದಲ್ಲಿ ಹೀಗೊಂದು ಕಥೆಯಿದೆ - ಹಿಂದೆ ಪ್ರಾಗ್‌ಜ್ಯೋತಿಷಪುರ (Jyothishpura) ಎಂಬಲ್ಲಿ ಭೌಮಾಸುರ (Bhoumasaru) ಅಥವಾ ನರಕಾಸುರನೆಂಬ (Narakasura) ಒಬ್ಬ ಬಲಾಢ್ಯ ರಾಕ್ಷಸನು ರಾಜ್ಯವನ್ನಾಳುತ್ತಿದ್ದನು. ಅವನು ದೇವತೆಗಳಿಗೆ ಮತ್ತು ಮಾನವರಿಗೆ ಬಹಳ ತೊಂದರೆ ಗಳನ್ನು ಕೊಡತೊಡಗಿದನು. ಈ ದುಷ್ಟದೈತ್ಯನು ಸ್ತ್ರೀಯರನ್ನು ಪೀಡಿಸತೊಡಗಿದನು. ಅವನು ತಾನು ಜಯಿಸಿ ತಂದಿದ್ದ ೧೬೦೦೦ ವಿವಾಹಯೋಗ್ಯ ರಾಜಕನ್ಯೆಯರನ್ನು ಸೆರೆವಾಸದಲ್ಲಿಟ್ಟು ಅವರೊಂದಿಗೆ ವಿವಾಹವಾಗುವ ಹುನ್ನಾರವನ್ನು ಮಾಡಿದ್ದನು. ಇದರಿಂದ ಎಲ್ಲ ಕಡೆಗಳಲ್ಲಿಯೂ ಹಾಹಾಕಾರವೆದ್ದಿತು. ಶ್ರೀಕೃಷ್ಣನಿಗೆ ಈ ವೃತ್ತಾಂತವು ತಿಳಿದ ಕೂಡಲೇ ಅವನು ಸತ್ಯಭಾಮೆಯೊಂದಿಗೆ ಬಂದು ನರಕಾಸುರನೊಂದಿಗೆ ಯುದ್ಧವನ್ನು ಮಾಡಿ ನರಕಾಸುರನನ್ನು ವಧಿಸಿದನು ಮತ್ತು ಆ ರಾಜಕನ್ಯೆಯರನ್ನು ಮುಕ್ತಗೊಳಿಸಿದನು. ಸಾಯುವಾಗ ನರಕಾಸುರನು ಕೃಷ್ಣನಲ್ಲಿ ‘ಇಂದಿನ ತಿಥಿಗೆ ಯಾರು ಮಂಗಲಸ್ನಾನವನ್ನು ಮಾಡುತ್ತಾರೆಯೋ, ಅವರಿಗೆ ನರಕದ ತೊಂದರೆಯಾಗದಿರಲಿ’ ಎಂಬ ವರವನ್ನು ಬೇಡಿದನು ಮತ್ತು ಕೃಷ್ಣನು ಆ ವರವನ್ನು ಕೊಟ್ಟನು. ಅಂದಿನಿಂದ ಆಶ್ವಯುಜ ಕೃಷ್ಣ ಚತುರ್ದಶಿಯು (Naraka Chaturdashi) ನರಕ ಚತುರ್ದಶಿಯೆಂದು ಪರಿಗಣಿಸಲ್ಪಟ್ಟಿತು ಮತ್ತು ಜನರು ಆ ದಿನ ಸೂರ್ಯೋದಯಕ್ಕೆ ಮೊದಲು ಎದ್ದು ಅಭ್ಯಂಗಸ್ನಾನವನ್ನು ಮಾಡತೊಡಗಿದರು. ಚತುರ್ದಶಿಯಂದು ಬೆಳಗಿನ ಜಾವದಲ್ಲಿ ನರಕಾಸುರನನ್ನು ವಧಿಸಿ ಅವನ ರಕ್ತದ ತಿಲಕವನ್ನು ಹಣೆಯ ಮೇಲೆ ಇಟ್ಟುಕೊಂಡು ಶ್ರೀಕೃಷ್ಣನು ಮನೆಗೆ ಬಂದ ಕೂಡಲೇ ತಾಯಂದಿರು ಅವನನ್ನು ಆಲಿಂಗಿಸಿಕೊಂಡರು. ಸ್ತ್ರೀಯರು ಆರತಿ ಎತ್ತಿ ತಮ್ಮ ಆನಂದವನ್ನು ವ್ಯಕ್ತಪಡಿಸಿದರು.’

ಆಕಾಶದಲ್ಲಿ ನಕ್ಷತ್ರಗಳಿರುವಾಗ ಬ್ರಾಹ್ಮೀಮಹೂರ್ತದಲ್ಲಿ ಅಭ್ಯಂಗಸ್ನಾನವನ್ನು ಮಾಡುತ್ತಾರೆ. ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳವರೆಗೆ ಮತ್ತು ಪುನಃ ಕಾಲುಗಳಿಂದ ತಲೆಯವರೆಗೆ ನೀರನ್ನು ಸಿಂಪಡಿಸಿಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ. ಅಭ್ಯಂಗಸ್ನಾನದ ನಂತರ ಅಪಮೃತ್ಯುವಿನ ನಿವಾರಣೆಗಾಗಿ ಯಮತರ್ಪಣವನ್ನು ಮಾಡಬೇಕೆಂದು ಹೇಳಲಾಗಿದೆ. ಯಮತರ್ಪಣದ ವಿಧಿಯನ್ನು ಪಂಚಾಂಗದಲ್ಲಿ ಕೊಟ್ಟಿರುತ್ತಾರೆ. ಅದರಂತೆ ವಿಧಿಯನ್ನು ಮಾಡಬೇಕು. ಅನಂತರ ತಾಯಿಯು ಮಕ್ಕಳಿಗೆ ಆರತಿಯನ್ನು ಎತ್ತುತ್ತಾಳೆ. ನರಕಾಸುರನ ವಧೆಯ ಪ್ರತೀಕವೆಂದು ಕೆಲವರು ಮಹಾಲಿಂಗನ ಬಳ್ಳಿಯ ಕಾಯಿಯನ್ನು ಕಾಲಿನಿಂದ ಜಜ್ಜಿ ಕಾಲಿನಿಂದಲೇ ಬಿಸಾಡುತ್ತಾರೆ. ಇನ್ನೂ ಕೆಲವರು ಅದರ ರಸವನ್ನು ನಾಲಗೆಗೆ ಹಚ್ಚಿಕೊಳ್ಳುತ್ತಾರೆ. ಮಧ್ಯಾಹ್ನ ಬ್ರಾಹ್ಮಣರಿಗೆ ಭೋಜನವನ್ನು ನೀಡಿ ವಸ್ತ್ರದಾನ ಮಾಡುತ್ತಾರೆ. ಪ್ರದೋಷಕಾಲದಲ್ಲಿ ದೀಪದಾನ ಮಾಡುತ್ತಾರೆ. ಪ್ರದೋಷವ್ರತವನ್ನು ತೆಗೆದುಕೊಂಡವರು ಪ್ರದೋಷಪೂಜೆ ಮತ್ತು ಶಿವಪೂಜೆಯನ್ನು ಮಾಡುತ್ತಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ