LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ



ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿದ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ 2024-25ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಪ್ರತಿ ಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಬಹುಮಾನದ ಮೊತ್ತ ರೂ. 25,000/-ಗಳಾಗಿರುತ್ತದೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡುವುದು.

ಕೃತಿಗಳು ಜನವರಿ 2024ರಿಂದ ಡಿಸೆಂಬರ್ 2024ರೊಳಗೆ ಮುದ್ರಣವಾಗಿ ಪ್ರಕಟಣೆಯಾಗಿರಬೇಕು. ಅನುವಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. ಪುಸ್ತಕಗಳು ಯಾವುದೇ ಪದವಿಗಾಗಿ, ಪಿಹೆಚ್.ಡಿ. ಮತ್ತು ಪಠ್ಯ ಪುಸ್ತಕಕ್ಕೆ ಸಿದ್ದಪಡಿಸಲಾದ ವಿಷಯವಾಗಿರಬಾರದು. ಬಹುಮಾನಕ್ಕಾಗಿ ಕಳುಹಿಸಲ್ಪಡುವ ಕೃತಿಗಳು ನಾಟಕವಾಗಿರಬಾರದು, ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು.
ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. ಮರು ಮುದ್ರಣ ಪುಸ್ತಕವಾಗಿರಬಾರದು. ಅಕಾಡೆಮಿಯ ಸದಸ್ಯರು ರಚಿಸಿರುವ ಕೃತಿಗಳಾಗಿರಬಾರದು ಹಾಗೂ ಸಂಪಾದಿತ ಕೃತಿಗಳು ಸಹ ಆಗಿರಬಾರದು.

ಕೃತಿಯು ಕನಿಷ್ಠ 60 ಪುಟಗಳನ್ನು ಹೊಂದಿರಬೇಕು. ಪುಸ್ತಕ ಬಹುಮಾನಕ್ಕೆ ಲೇಖಕರು ಮಾತ್ರ ಅರ್ಹರಾಗಿರುತ್ತಾರೆ. ಯಾವುದೇ ಕಾರಣಕ್ಕೂ ಬಹುಮಾನಕ್ಕಾಗಿ ಸಲ್ಲಿಸಲಾಗುವ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಆಸಕ್ತ ಲೇಖಕರು, ಹೆಸರು, ವಿಳಾಸ, ಪ್ರಕಟಣೆ ವರ್ಷದೊಂದಿಗೆ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ನೆಲಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560 002, ದೂರವಾಣಿ ಸಂ. 080-22244176 ಇಲ್ಲಿಗೆ 2025ನೇ ಜೂನ್ 25 ರೊಳಗಾಗಿ ಸಲ್ಲಿಸುವಂತೆ ಕರ್ನಾಟಕ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ