LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಷೇದಿತ ಮಾದಕ ಗಾಂಜಾ ಮಾರುತ್ತಿದ್ದ ವಿದೇಶಿಯೋರ್ವನ ಬಂಧನ

ವಿ.ವಿ.ಪುರಂ ಪೊಲೀಸ್ ಠಾಣೆಯ (VV Puram Station) ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ 27/09/2025 ರಂದು ಖಚಿತ ಮಾಹಿತಿ ದೊರೆತಿರುತ್ತದೆ. ಠಾಣಾ ಸರಹದ್ದಿನ ಕೆ.ಆರ್.ರಸ್ತೆಯಲ್ಲಿ (K.R.Road) ಓರ್ವ ವ್ಯಕ್ತಿಯು ನಿಷೇಧಿತ ಮಾದಕ ವಸ್ತುವಾದ ಗಾಂಜಾ (Ganja) ವನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿರುವುದು, ಆ ಮಾಹಿತಿಯನ್ನಾಧರಿಸಿ, ನಂತರ ಠಾಣೆಯಲ್ಲಿ ಎನ್.ಡಿ.ಪಿ.ಎಸ್ (NDPS Act)  ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
ಸ್ಥಳಕ್ಕೆ ಧಾವಿಸಿ, ದಾಳಿಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಆತನು ಮೂಲತಃ ನೇಪಾಳ ದೇಶದವನಾಗಿದ್ದು, ಹೆಚ್ಚಿನ ಹಣ ಗಳಿಸುವ ಉದ್ಧೇಶದಿಂದ ಅಪರಿಚಿತನೋರ್ವನಿಂದ ನಿಷೇಧಿತ ಮಾದಕವಸ್ತು ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಆತನ ವಶದಲ್ಲಿದ್ದ 330 ಗ್ರಾಂ ನಿಷೇಧಿತ ಮಾದಕವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ ರೂ. 45,000/-

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರ್‌ಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಕಾರ್ಯಾಚರಣೆಯನ್ನು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಭರಮಪ್ಪ ಜಗಲಾಸರ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮೀದ್ ಬಾಷಾ ರವರ ಉಸ್ತುವಾರಿಯಲ್ಲಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಧಮೇಂದ್ರ.ಟಿ.ಎ0 ರವರ ನೇತೃತ್ವದಲ್ಲಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ